BMRCL Maintainer Recruitment 2025- ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025

SMM MEDIA

BMRCL Maintainer Recruitment 2025 – Namma Metro Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಮೆಂಟೇನರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BMRCL Maintainer Recruitment 2025 : Details of Vacancies

ಹುದ್ದೆ : ಮೆಂಟೇನರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಟ್ರೇಡನಲ್ಲಿ ಎರಡು ವರ್ಷಗಳ ಐಟಿಐ ಅರ್ಹತೆ : ಎಲೆಕ್ಟ್ರಿಷಿಯನ್ / ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್/ ವೈರ್ ಮ್ಯಾನ/ ಫಿಟ್ಟರ್/ ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ವೇರ್/ ಮೆಕ್ಯಾನಿಕ್ – ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಇನ್ಫಾರ್ಮೇಶನ್ ಟೆಕ್ನಾಲಾಜಿ ಮತ್ತು ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಮಂಟೆನನ್ಸ್ / ಮೆಕ್ ಕಮುನಿಕೇಶನ್ ಇಕ್ಯೂಪ್ಮೇಂಟ್ ಮೆಂಟೇನನ್ಸ್, ಮೆಕ್ಯಾನಿಕ್ ಮ್ಯೆಕೆಟ್ರಾನಿಕ್ಸ್.



ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ ರೂ. 59,060 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 23/04/2025 ರಂದು ಅಭ್ಯರ್ಥಿಯು ಗರಿಷ್ಠ 50 ವರ್ಷ ವಯಸ್ಸನ್ನು ಮೀರಿರಬಾರದು.



ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ನಂತರ ಭರ್ತಿ ಮಾಡಿದ ಅಪ್ಲಿಕೇಷನ್ ಪ್ರಿಂಟ್ ತೆಗೆದು ಸ್ವಯಂ ದೃಢೀಕರಿಸಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್/ ಕೋರಿಯರ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ.ಸಿ ಕಾಂಪ್ಲೆಕ್ಸ್, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027

ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 23, 2025
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 22, 2025 ಮೇ 29, 2025
ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮೇ 27, 2025 ಜೂನ್ 04, 2025



BMRCL Maintainer Recruitment 2025 : Important Links

EXTENDED NOTIFICATIONCLICK HERE
NOTIFICATIONCLICK HERE
APPLY ONLINECLICK HERE


ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.






Post a Comment

Cookie Consent
We serve cookies on this site to analyze traffic, remember your preferences, and optimize your experience.
AdBlock Detected!
Site is Blocked
Sorry! This site is not available in your country.
';console.log('Time Zone: '+dtctCntry);if(dtctCntry===blkCntry){setInterval(function(){addCt(getid('cntryBlk'),'visible')},1000);}}checkCntry();