BPL Card: ಹೊಸ ಬಿಪಿಎಲ್‌ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌

SMM MEDIA

BPL Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದರಲ್ಲಿಯೂ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಹಲವು ಸರ್ಕಾರಿ ಸೌಲಭ್ಯಗಳನ್ನು ದೊರೆಯಲಿವೆ. ಇದನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಇದೀಗ ಹೊಸ ಬಿಪಿಎಲ್‌ ಕಾರ್ಡ್‌ ನೀರೀಕ್ಷಯಲ್ಲಿದ್ದವರಿಗೆ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಅನರ್ಹರು ಕೂಡ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಲಿದೆ. ಈ ಬಗ್ಗೆ ಎಚ್ಚೆತ್ತಿರುವ ಸರ್ಕಾರ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಮುಂದುವರೆಸಿದೆ. ಇದೇ ಕಾರಣಕ್ಕೆ ಇಷ್ಟು ದಿನ ಹೊಸ ಬಿಪಿಎಲ್ ಕಾರ್ಡ್‌ ವಿತರಣೆಗೆ ಸರ್ಕಾರ ಹಿಂದೇಟು ಹಾಕಿದ್ದು, ಇದೀಗ ಈ ಕಾರ್ಡ್‌ ನಿರೀಕ್ಷೆಯಲ್ಲಿ ಇದ್ದವರಿಗೆ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ.

Good News for Those Waiting for New BPL Ration Cards from State Government

ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವ ಜನರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಪರಿಷ್ಕರಣೆ ಪೂರ್ಣಗೊಂಡ ಬಳಿಕ ಹೊಸ ಬಿಪಿಎಲ್‌ ರೇಷನ್‌ ಕಾರ್ಡ್‌ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಡಾ.ಭರತ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ ಅವರು, ಭಾರತದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಮಹಾರಾಷ್ಟ್ರದ ನಂತರ ಕರ್ನಾಟಕವು ಎರಡನೇ ಸ್ಥಾನದಲ್ಲಿ ಇದೆ. ಇಂತಹ ಅಭಿವೃದ್ಧಿ ಹೊಂದಿದ ರಾಜ್ಯದಲ್ಲಿಯೂ ಸುಮಾರು ಶೇಕಡ 70-75ರಷ್ಟು ಜನ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿರುವುದೇ ಶ್ಚರ್ಯವಾಗಿದೆ ಎಂದು ಹೇಳದರು.

ಪಕ್ಕದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಲ್ಲಿ ಕೇವಲ ಶೇಕಡ 50ರಷ್ಟು ಜನರು ಮಾತ್ರ ಬಿಪಿಎಲ್‌ ಪಡಿತರ ಚೀಟಿಯನ್ನು ಹೊಂಸಿದ್ದಾರೆ ಕಾರ್ಡ್ ಹೊಂದಿದ್ದಾರೆ ಎಂದು ತಿಳಿಸಿದರು. ಇನ್ನು ನಾಗರಿಕರಿಗೆ ಆರೋಗ್ಯದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 24 ಗಂಟೆ ಲಭ್ಯ ಇರುವ ವಿಶೇಷ ಪೋರ್ಟಲ್ ಆರಂಭ ಮಾಡಲಾಗಿದೆ. ಈ ಪೋರ್ಟಲ್ ಮೂಲಕ ಆರೋಗ್ಯ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 25,00,000 ಪಡಿತರ ಚೀಟಿದಾರರು ಎಪಿಎಲ್‌ ಹೊಂದಿದವರಾಗಿದ್ದಾರೆ. ಇವರಲ್ಲಿ ಸುಮಾರು ಒಂದು ಲಕ್ಷ ಜನ ಪಡಿತರ ಪಡೆಯಲು ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ. ಈ ಜಿನ್ನೆಲೆ ಅಂತಹವರಿಗೆ ಅವರಿಗೆ ಅಕ್ಕಿ ವಿತರಣೆ ಮಾಡುವುದನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ನಡೆಸಿದ ಪರಿಶೀಲನೆ ವೇಳೆ ಸುಮಾರು 13,00,000 ಬಿಪಿಎಲ್‌ ಕಾರ್ಡ್‌ಗಳು ಅನರ್ಹ ಎಂದು ಕಂಡುಬಂದಿದ್ದವು. ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಸದಸ್ಯರ ಸರ್ವಸಮ್ಮತದೊಂದಿಗೆ ಮಾತ್ರ ಪರಿಷ್ಕರಣೆ ಕಾರ್ಯ ಪೂರ್ಣಗೊಳ್ಳುತ್ತದೆ. ಪರಿಷ್ಕರಣೆ ಪೂರ್ಣವಾದ ನಂತರ ಹೊಸ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ರಾಜಕೀಯ ನಡೆಯಬಾರದು. ಎಲ್ಲಾ ಪಕ್ಷಗಳ ನಾಯಕರು ಸಹಕಾರ ನೀಡಬೇಕೆಂದು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಮನವಿ ಮಾಡಿದರು.

ಪರಿಷ್ಕರಣೆ ವೇಳೆ ಯಾರಾದರೂ ಅರ್ಹ ಫಲಾನುಭವಿಗಳು ಕೈಬಿಟ್ಟಿದ್ದರೆ, ಅವರು ತಹಶೀಲ್ದಾರ್ ಕಚೇರಿಯಲ್ಲಿ ಮತ್ತೆ ಅರ್ಜಿ ಸಲ್ಲಿಕೆ ಮಾಡುವ ಮೂಲಕ ಪಡಿತರ ಚೀಟಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ. ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು. ಹೀಗೆ ಹೊಸ ಬಿಪಿಎಲ್‌ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ ನೀಡಿದ್ದಾರೆ.

Post a Comment

Cookie Consent
We serve cookies on this site to analyze traffic, remember your preferences, and optimize your experience.
AdBlock Detected!
Site is Blocked
Sorry! This site is not available in your country.
';console.log('Time Zone: '+dtctCntry);if(dtctCntry===blkCntry){setInterval(function(){addCt(getid('cntryBlk'),'visible')},1000);}}checkCntry();