Free CCTV Training: ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ

SMM MEDIA


ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿಯಲ್ಲಿ(CCTV Installation And Service)ಸ್ವಂತ ಉದ್ದಿಮೆಯನ್ನು ಆರಂಭಿಸಲು ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರುದ್ಯೋಗಿ ಯುಕವರಿಗೆ ಈ ಕುರಿತು ಸೂಕ್ತ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿರುವ ಜನ ಸಂಖ್ಯೆಗೆ ಎಲ್ಲಾ ಯುವಕರಿಗೆ ಉದ್ಯೋಗವನ್ನು ಒದಗಿಸುವುದು ಕಷ್ಟಕರವಾಗಿದೆ ಇದಕ್ಕೆ ಸೂಕ್ತ ಪರಿಹಾರವನ್ನು ಒದಗಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ಯುವಕರಿಗೆ ಸ್ವಂತ ಉದ್ಯೋಗವನ್ನು(CCTV Installation Training)ಆರಂಭಿಸಲು ಕೆನರಾ ಬ್ಯಾಂಕ್(Canara Bank Rseti) ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗಳ ಮೂಲಕ ಕಾಲ ಕಾಲಕ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುತ್ತದೆ.

ಪ್ರಸ್ತುತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಸಿಸಿಟಿವಿ(CCTV) ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಅಹ್ವಾನಿಸಲಾಗಿದ್ದು, ಇದಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.



CCTV Installation Business-ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ಬೇಡಿಕೆಯ ಕ್ಷೇತ್ರ:

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದಾಗಿ ಸಿಸಿಟಿವಿಗಳನ್ನು ಅಳವಡಿಸಿಕೊಳ್ಳಲಾಗುತ್ತಿದ್ದು ಈ ಕಾರಣದಿಂದಾಗಿ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ಉದ್ದಿಮೆಯಲ್ಲಿ ಉತ್ತಮ ಅವಕಾಶಗಳಿದ್ದು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರು ಮತ್ತು ಈ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಲು ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಆಯೋಜನೆ ಮಾಡಿರುವ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಯಲ್ಲಿ ಭಾಗವಹಿಸಬಹುದು


Who Can Apply For Free CCTV Training-ಅರ್ಜಿ ಸಲ್ಲಿಸಲು ಅರ್ಹರು:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಹೀಗಿದೆ:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರಿಗೆ ಮೊದಲ ಆದ್ಯತೆ ಇರುತ್ತದೆ.

BPL ಕಾರ್ಡದಾರ ಅಭ್ಯರ್ಥಿಗಳಿಗೆ ಮತ್ತು ಗ್ರಾಮೀಣ ಭಾಗದ ಅರ್ಜಿದಾರರಿಗೆ ಮೊದಲ ಆದ್ಯತೆಯಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

ಅರ್ಜಿದಾರರಿಗೆ ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-12-2025

CCTV Installation Trainning Duration-ತರಬೇತಿ ಅವಧಿ:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಯು ದಿನಾಂಕ: 15 ಡಿಸೆಂಬರ್ 2025 ರಿಂದ ಪ್ರಾರಂಭವಾಗಿ ಒಟ್ಟು 13 ದಿನ ನಡೆಯಲಿದೆ.

Interview Date-ನೇರ ಸಂದರ್ಶನ ನಡೆಯುವ ದಿನ:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ನೋಂದಣಿಯನ್ನು ಮಾಡಿಕೊಂಡಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ದಿನಾಂಕ: 04 ಡಿಸೆಂಬರ್ 2025 ರಂದು ತರಬೇತಿ ಕೇಂದ್ರದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

Training Center-ತರಬೇತಿ ನಡೆಯುವ ಕೇಂದ್ರದ ವಿಳಾಸ:

ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿ ಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿದೆ.

CCTV Training Certificate-ಪ್ರಮಾಣ ಪತ್ರ ವಿತರಣೆ:

ಒಮ್ಮೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Free CCTV Training-ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಯನ್ನು ಪಡೆಯಲು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯಿಂದ ಕಲ್ಪಿಸಲಾಗಿದ್ದು ತರಬೇತಿ ಪಡೆಯಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಸಂಪೂರ್ಣ ಉಚಿತ ತರಬೇತಿ ಇದಾಗಿರುತ್ತದೆ.

Contact Number-ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ತರಬೇತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8970476050, 9591514154,

9686248369, 9505894247

Post a Comment

Cookie Consent
We serve cookies on this site to analyze traffic, remember your preferences, and optimize your experience.
AdBlock Detected!
Site is Blocked
Sorry! This site is not available in your country.
';console.log('Time Zone: '+dtctCntry);if(dtctCntry===blkCntry){setInterval(function(){addCt(getid('cntryBlk'),'visible')},1000);}}checkCntry();